2 ಸಮುಯೇಲ 14:13 - ಕನ್ನಡ ಸತ್ಯವೇದವು J.V. (BSI)13 ಆಕೆಯು - ಅರಸನು ಈ ತೀರ್ಪುಕೊಟ್ಟದ್ದರಿಂದ ತನ್ನನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟವನನ್ನು ಸೇರಿಸಿಕೊಳ್ಳಲೊಲ್ಲದೆ ಹೋಗುವದರಿಂದ ದೇವಪ್ರಜೆಗೆ ವಿರೋಧವಾಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಆ ಸ್ತ್ರೀಯು, “ದೇವರ ಜನರ ವಿರುದ್ಧವಾಗಿ ನೀನು ಈ ಕಾರ್ಯಗಳನ್ನು ಮಾಡಲು ಯೋಚಿಸಿರುವುದಾದರೂ ಏಕೆ? ಹೌದು, ನೀನು ಕೊಟ್ಟ ತೀರ್ಪಿನ ಮೂಲಕ ನೀನು ನನ್ನನ್ನು ತಪ್ಪಿತಸ್ಥನೆಂದು ತೋರಿಸಿ ಕೊಟ್ಟಿರುವೆ. ಏಕೆಂದರೆ ನೀನು ಬಲಾತ್ಕಾರದಿಂದ ಮನೆ ಬಿಡಿಸಿದ ಮಗನನ್ನು ಮನೆಗೆ ಕರೆದು ತಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು. ಅಧ್ಯಾಯವನ್ನು ನೋಡಿ |