2 ಸಮುಯೇಲ 14:15 - ಕನ್ನಡ ಸತ್ಯವೇದವು J.V. (BSI)15 ಅದಿರಲಿ, ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ ಅವನು ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಾನು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವದಕ್ಕೆ ಬಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, ‘ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಿರಲಿ, ತಮ್ಮ ಸೇವಕಿ ಆದ ನನ್ನನ್ನು ಜನರು ಹೆದರಿಸಿದ್ದರಿಂದ ನಾನು ಈ ಸಂಗತಿಯನ್ನು ಅರಸರಿಗೆ ತಿಳಿಸಿದರೆ ಅವರು ತಮ್ಮ ಸೇವಕಿಯ ಬಿನ್ನಹವನ್ನು ಆಲಿಸಾರು ಎಂದುಕೊಂಡು ನನ್ನ ಒಡೆಯರಾದ ಅರಸರಿಗೆ ಇದನ್ನು ತಿಳಿಸುವುದಕ್ಕೆ ಬಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ರಾಜನಾದ ನನ್ನ ಒಡೆಯನೇ, ನಾನು ಈ ಮಾತುಗಳನ್ನು ನಿನಗೆ ಹೇಳುವುದಕ್ಕೆಂದೇ ಬಂದೆನು. ಏಕೆಂದರೆ ಜನರು ನನ್ನನ್ನು ಹೆದರಿಸಿದರು. ನಾನು ನನ್ನೊಳಗೆ ಹೀಗೆಂದುಕೊಂಡೆನು. ‘ನಾನು ರಾಜನೊಂದಿಗೆ ಮಾತಾಡುತ್ತೇನೆ. ಬಹುಶಃ ರಾಜನು ನನ್ನ ಮಾತುಗಳನ್ನು ಕೇಳಿ ಸಹಾಯ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅಧ್ಯಾಯವನ್ನು ನೋಡಿ |