Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:17 - ಕನ್ನಡ ಸತ್ಯವೇದವು J.V. (BSI)

17 ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿರುತ್ತಾನೆ; ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:17
13 ತಿಳಿವುಗಳ ಹೋಲಿಕೆ  

ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ, ತನಗೆ ಸರಿಕಂಡದ್ದನ್ನು ಮಾಡಲಿ.


ಆಗ ಆಕೀಷನು ದಾವೀದನಿಗೆ - ನೀನು ಒಳ್ಳೆಯವನೆಂದು ನನಗೆ ಗೊತ್ತದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ; ಆದರೆ ಫಿಲಿಷ್ಟಿಯಪ್ರಭುಗಳು - ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದೆಂದು ಹೇಳುತ್ತಾರಲ್ಲಾ;


ಅಬ್ಷಾಲೋಮನ ವಿಷಯವನ್ನು ರೂಪಾಂತರಪಡಿಸುವದಕ್ಕೋಸ್ಕರ ನಿನ್ನ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯನು ದೇವದೂತನಂಥ ಜ್ಞಾನಿಯು; ಅವನು ಭೂಲೋಕದಲ್ಲಿ ನಡೆಯುವದನ್ನೆಲ್ಲಾ ತಿಳುಕೊಳ್ಳುವನು ಎಂದು ಉತ್ತರಕೊಟ್ಟಳು.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ.


ನೆರೆಯವನೊಂದಿಗೆ ವಂಚಿಸುವ ಸವಿನುಡಿಗಳನ್ನಾಡುವವನು ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆ.


ರುಚಿವಿಮರ್ಶೆಯಲ್ಲಿ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ನನ್ನ ಅಂಗಳವು ವಿಪತ್ತುಗಳ [ನ್ಯಾಯಾನ್ಯಾಯವನ್ನು] ವಿವೇಚಿಸಲಾರದೋ?


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಆಗ ಅರಸನು ಆ ಸ್ತ್ರೀಗೆ - ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು ಎಂದು ಹೇಳಲು ಆಕೆಯು - ಅರಸನ ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟಳು.


ನಾವು ಮೋಶೆಯ ಎಲ್ಲಾ ಮಾತುಗಳನ್ನು ಕೇಳಿದಂತೆ ನಿನ್ನ ಮಾತುಗಳನ್ನೂ ಕೇಳುವೆವು; ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡಲೂ ಇರಲಿ.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು