Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:18 - ಕನ್ನಡ ಸತ್ಯವೇದವು J.V. (BSI)

18 ಆಗ ಅರಸನು ಆ ಸ್ತ್ರೀಗೆ - ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು ಎಂದು ಹೇಳಲು ಆಕೆಯು - ಅರಸನ ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು,” ಎಂದು ಹೇಳಿದನು. ಆಕೆ, “ಅರಸರ ಅಪ್ಪಣೆಯಾಗಲಿ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನಾದ ದಾವೀದನು ಆ ಸ್ತ್ರೀಗೆ, “ನಾನು ಕೇಳುವ ಪ್ರಶ್ನೆಗೆ ನೀನು ಉತ್ತರವನ್ನು ಹೇಳಲೇಬೇಕು” ಎಂದು ಉತ್ತರಿಸಿದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಿನ್ನ ಪ್ರಶ್ನೆಯನ್ನು ಕೇಳು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:18
5 ತಿಳಿವುಗಳ ಹೋಲಿಕೆ  

ನಾನು ನಿನ್ನ ಸಂಗಡ ಮಾತಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು - ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲೆವು; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು ಎಂದು ಪ್ರಶ್ನೆಮಾಡಿದ ಪಕ್ಷದಲ್ಲಿ


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು


ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿರುತ್ತಾನೆ; ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ ಅಂದಳು.


ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು