Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:25 - ಕನ್ನಡ ಸತ್ಯವೇದವು J.V. (BSI)

25 ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲ್ಯರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಯೇಲರಲ್ಲೇ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರು ಅಬ್ಷಾಲೋಮನನ್ನು, ಅವನ ಸುಂದರ ರೂಪಕ್ಕಾಗಿ ಬಹಳ ಹೊಗಳುತ್ತಿದ್ದರು. ಇಸ್ರೇಲಿನಲ್ಲಿ ಅವನಷ್ಟು ರೂಪವಂತನು ಬೇರೆ ಯಾರೂ ಇರಲಿಲ್ಲ. ಅಬ್ಷಾಲೋಮನ ತಲೆಯಿಂದ ಪಾದಗಳವರೆಗೆ ಯಾವ ಕಳಂಕವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:25
11 ತಿಳಿವುಗಳ ಹೋಲಿಕೆ  

ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು ಬಾಸುಂಡೆ ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವನ್ನು ಹಿಸಕಿ ಮುಚ್ಚಿಲ್ಲ, ಕಟ್ಟಿಲ್ಲ, ಎಣ್ಣೆಸವರಿ ಮೃದು ಮಾಡಿಲ್ಲ.


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.


ಅದನ್ನು ಕಳಂಕ ಸುಕ್ಕು ಮುಂತಾದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ ನಿರ್ದೋಷವೂ ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಮಾಡಿದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಚಂದವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.


ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಇವನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿ ಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಉನ್ನತವಾಗಿದ್ದನು.


ಅಂಗದೋಷವಿಲ್ಲದವರೂ ಸುಂದರರೂ ಸಮಸ್ತಶಾಸ್ತ್ರಜ್ಞರೂ ಪಂಡಿತರೂ ವಿದ್ಯಾನಿಪುಣರೂ ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕೆಂಬದಾಗಿ ಅಪ್ಪಣೆಕೊಟ್ಟನು.


ಅವನ ತಂದೆಯು - ನೀನು ಹಾಗೆ ಹೀಗೆ ಮಾಡಿದ್ದೇಕೆ ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿದ್ದು ಇರಲಿಲ್ಲ. ಅವನು ಬಹುಸುಂದರನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನು.


ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವದನ್ನು ನೋಡಿದ ಕೂಡಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು