2 ಸಮುಯೇಲ 14:32 - ಕನ್ನಡ ಸತ್ಯವೇದವು J.V. (BSI)32 ಅಬ್ಷಾಲೋಮನು ಅವನಿಗೆ - ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದರೆ ಒಳ್ಳೇದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು; ನಾನು ಹೇಗೂ ಅರಸನ ಮೋರೆಯನ್ನು ನೋಡಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು. ಅಧ್ಯಾಯವನ್ನು ನೋಡಿ |