Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:1 - ಕನ್ನಡ ಸತ್ಯವೇದವು J.V. (BSI)

1 ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನೂ ಕುದುರೆಗಳನ್ನೂ ತೆಗೆದುಕೊಂಡು ತನ್ನ ಮುಂದೆ ಮೈಗಾವಲಾಗಿ ಓಡುವದಕ್ಕೆ ಐವತ್ತು ಮಂದಿಯನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸ್ವಲ್ಪಕಾಲವಾದನಂತರ ಅಬ್ಷಾಲೋಮನು ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಮಂದಿ ಆಳುಗಳನ್ನು ನೇಮಿಸಿದನು. ಅದಕ್ಕಾಗಿ ಒಂದು ರಥವನ್ನೂ ಕುದುರೆಗಳನ್ನೂ ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದನಂತರ, ಅಬ್ಷಾಲೋಮನು ತನಗಾಗಿ ರಥವನ್ನೂ ಕುದರೆಗಳನ್ನೂ ಪಡೆದನು. ಅವನು ರಥವನ್ನು ನಡೆಸುವಾಗ ಅವನ ಮುಂದೆ ಓಡಲು ಐವತ್ತು ಜನರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:1
11 ತಿಳಿವುಗಳ ಹೋಲಿಕೆ  

ಹಗ್ಗೀತಳ ಮಗನಾದ ಅದೋನೀಯನು ನಾನೇ ಅರಸನಾಗತಕ್ಕವನು ಎಂಬದಾಗಿ ಉಬ್ಬಿಕೊಂಡು ತನಗೋಸ್ಕರ ರಥರಥಾಶ್ವಗಳನ್ನೂ ಮುಂದೆ ಓಡುವದಕ್ಕಾಗಿ ಐವತ್ತು ಮಂದಿ ಸಿಪಾಯಿಗಳನ್ನೂ ಇಟ್ಟುಕೊಂಡನು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.


ಯೆಹೋವನಾದ ನನ್ನ ಮಾತನ್ನು ಕೇಳು - ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದಿ;


ಅವರಿಗೆ - ಅರಸನ ಅಧಿಕಾರವೆಷ್ಟೆಂದು ಕೇಳಿರಿ - ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ಪಾಪಪ್ರಿಯನು ಕಲಹಪ್ರಿಯ; ತನ್ನ ಬಾಗಿಲನ್ನು ಎತ್ತರಿಸುವವನು ಹಾಳಾಗುವನು.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ; ದೀನರಲ್ಲಿ ಜ್ಞಾನ.


ಅವರು ಅರಸನ ಸನ್ನಿಧಿಗೆ ಬರಲು ಅರಸನು ಅವರಿಗೆ - ನೀವು ನನ್ನ ಸೇವಕರನ್ನು ಕರಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು