2 ಸಮುಯೇಲ 15:12 - ಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು. ಅಧ್ಯಾಯವನ್ನು ನೋಡಿ |