Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:18 - ಕನ್ನಡ ಸತ್ಯವೇದವು J.V. (BSI)

18 ದಾವೀದನ ಎಲ್ಲಾ ಸೇವಕರೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳೂ ಗತ್ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರೂ ಅರಸನ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದಾವೀದನ ಎಲ್ಲಾ ಸೇವಕರೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳು ಮತ್ತು ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರು ಅರಸನ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವನ ಸೇವಕರೆಲ್ಲ ರಾಜನನ್ನು ದಾಟಿ ಮುಂದೆ ಹೋದರು. ಕೆರೇತ್ಯರು, ಪೆಲೇತ್ಯರು ಮತ್ತು ಗಿತ್ತೀಯರು (ಗತ್‌ನ ಆರುನೂರು ಜನರು) ರಾಜನನ್ನು ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನ ಸಮಸ್ತ ಸೇವಕರೂ, ಸಮಸ್ತ ಕೆರೇತ್ಯರೂ, ಸಮಸ್ತ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತೀಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:18
16 ತಿಳಿವುಗಳ ಹೋಲಿಕೆ  

ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.


ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾಪತಿ; ಯೆಹೋಯಾದಾವನ ಮಗನಾದ ಬೆನಾಯಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಆಗ ಅವನು ಯೋವಾಬನ ಸೈನಿಕರನ್ನೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರಕೊಂಡು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೆರೂಸಲೇವಿುನಿಂದ ಹೊರಟನು.


ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.


ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.


ಅದನ್ನು ದಾವೀದ ನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.


ಅವನೂ ಅವನ ಜನರೂ ತಮ್ಮತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಿಸಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.


ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.


ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ


ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ


ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.


ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿ ಆಮೇಲೆ ಅವನನ್ನು ಹುಡುಕಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು