Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:20 - ಕನ್ನಡ ಸತ್ಯವೇದವು J.V. (BSI)

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವದು; ಹೀಗಿರುವದರಿಂದ ನಿನ್ನೆ ಬಂದಂಥ ನಿನ್ನನ್ನು ಕರಕೊಂಡು ಹೋಗಿ ಸುಮ್ಮನೆ ಯಾಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರರನ್ನು ಕರಕೊಂಡು ಹಿಂದಿರುಗಿಹೋಗು; ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ನನ್ನ ಜೊತೆ ಸೇರಿಕೊಳ್ಳಲು ಬಂದದ್ದು ನಿನ್ನೆಯಷ್ಟೇ. ನೀನು ಈಗ ನನ್ನೊಂದಿಗೆ ಬೇರೆಬೇರೆ ಸ್ಥಳಗಳಲ್ಲಿ ಅಲೆಯಬೇಕೇ? ಇಲ್ಲ! ನಿನ್ನ ಸೋದರರನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಹಿಂತಿರುಗಿಹೋಗು. ದಯೆಯೂ ನಂಬಿಗಸ್ತಿಕೆಯೂ ನಿನ್ನಲ್ಲಿ ತೋರಿಬರಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:20
17 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.


ಆತನ ಕೃಪಾಸತ್ಯತೆಗಳು ನಿಮ್ಮೊಂದಿಗಿರಲಿ; ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರಮಾಡುವೆನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಸಮುದ್ರದಿಂದ ಸಮುದ್ರಕ್ಕೆ, ಬಡಗಲಿಂದ ಮೂಡಲಿಗೆ ಬಳಲುತ್ತಾ ಹೋಗುವರು, ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು; ಆದರೂ ಅದು ಸಿಕ್ಕದು.


ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ನೀತಿನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿಸತ್ಯತೆಗಳೇ.


ಕೃಪೆಯೂ ಸತ್ಯವೂ ಒಂದನ್ನೊಂದು ಕೂಡಿರುವವು; ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುವವು.


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮಸತ್ಯತೆಗಳು ಅವನ ಬೆಂಗಾವಲಾಗಿರಲಿ.


ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಬೊಗಳುತ್ತಾರೆ.


ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆ; ಅದರ ವಿಷಯ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;


ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ - ನೀವು ಕರುಣೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಅಶೀರ್ವಾದವುಂಟಾಗಲಿ.


ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು