Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:27 - ಕನ್ನಡ ಸತ್ಯವೇದವು J.V. (BSI)

27 ಇದಲ್ಲದೆ ಅವನು ಯಾಜಕನಾದ ಚಾದೋಕನಿಗೆ - ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು, ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:27
11 ತಿಳಿವುಗಳ ಹೋಲಿಕೆ  

ಯೋನಾತಾನ್ ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಇವರು ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತು ಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಗೆ ಬರಲಿಲ್ಲ.


(ಪೂರ್ವಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರಕೇಳಬೇಕಾದರೆ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದರ್ಶಿಗಳೆಂದು ಕರೆಯುತ್ತಿದ್ದರು.)


ದೇವರು ಅವನಿಗೆ - ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು ಎಂಬದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.


ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ -


ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ; ಒಬ್ಬನು ಚಾದೋಕನ ಮಗನಾದ ಅಹೀಮಾಚನು; ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು ಎಂದು ಹೇಳಿ ಅವನನ್ನು ಕಳುಹಿಸಿದನು.


ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ - ಅರಸನೇ, ನಾನು ನಿನ್ನ ಸೇವಕನು; ಮುಂಚೆ ನಿನ್ನ ತಂದೆಯನ್ನು ಸೇವಿಸಿದಂತೆ ಈಗ ನಿನ್ನನ್ನು ಸೇವಿಸುತ್ತೇನೆ ಎಂದು ಹೇಳುವದಾದರೆ ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ನಿನಗೆ ಅನುಕೂಲವಾಗುವದು.


ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು ಎಂದನು.


ಯಾಜಕನಾದ ಎಬ್ಯಾತಾರನ ಮಗ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ - ಬಾ, ನೀನು ಯೋಗ್ಯಪುರುಷನೂ ಶುಭವರ್ತಮಾನತರುವವನೂ ಆಗಿರುತ್ತೀ ಅಂದನು.


ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು; ಇವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿ ಕೊಂಡವನು.


ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು