Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:4 - ಕನ್ನಡ ಸತ್ಯವೇದವು J.V. (BSI)

4 ವ್ಯಾಜ್ಯವಾಗಲಿ ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇವಿುಸಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವ್ಯಾಜ್ಯವಾಗಲಿ ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ನಾಡಿನ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಸೂಚಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಲ್ಲದೆ ಅಬ್ಷಾಲೋಮನು, “ಯಾರಾದರೂ ನನ್ನನ್ನು ಈ ದೇಶದಲ್ಲಿ ನ್ಯಾಯಾಧೀಶನನ್ನಾಗಿ ಮಾಡಿದ್ದರೆ ಒಳ್ಳೆಯದಾಗುತ್ತಿತ್ತು. ತೀರ್ಪಿಗಾಗಿ ತಮ್ಮ ತೊಂದರೆಗಳೊಂದಿಗೆ ಬರುವ ಪ್ರತಿಯೊಬ್ಬನಿಗೂ ಆಗ ನಾನು ಸಹಾಯ ಮಾಡಬಹುದಾಗಿತ್ತು. ಅವನ ತೊಂದರೆಗೆ ತೃಪ್ತಿಕರವಾದ ಪರಿಹಾರವನ್ನು ನೀಡಲು ನಾನು ಸಹಾಯ ಮಾಡಬಹುದಾಗಿತ್ತು” ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಅಬ್ಷಾಲೋಮನು, “ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ನೇಮಕವಾಗಿದ್ದರೆ ಎಷ್ಟೋ ಒಳ್ಳೆಯದು. ಆಗ ವ್ಯಾಜ್ಯವಾದರೂ, ನ್ಯಾಯವಿಚಾರಣೆಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ, ನಾನು ಅವನಿಗೆ ನೀತಿಯಿಂದ ನ್ಯಾಯತೀರಿಸುವೆನು,” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:4
7 ತಿಳಿವುಗಳ ಹೋಲಿಕೆ  

ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆನು ಎಂದು ಹೇಳಿ - ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ ಎಂದು ಕೊಚ್ಚಿಕೊಂಡನು.


ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.


ನಿನ್ನನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ; ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.


ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳದಿರು.


ಯಾವನಾದರೂ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುವದಕ್ಕೆ ಬಂದರೆ ಅವನು ಕೂಡಲೆ ಕೈಚಾಚಿ ಅವನನ್ನು ಹಿಡಿದು ಮುದ್ದಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು