2 ಸಮುಯೇಲ 16:10 - ಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಅರಸನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿರಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ನೀನು ಹೀಗೇಕೆ ಮಾಡಿದಿ ಎಂದು ಅವನನ್ನು ಯಾರು ಕೇಳಬಹುದು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು. ಅಧ್ಯಾಯವನ್ನು ನೋಡಿ |
ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.