2 ಸಮುಯೇಲ 16:11 - ಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ - ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವದು ಯಾವ ದೊಡ್ಡ ಮಾತು! ಬಿಡಿರಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ. ಅಧ್ಯಾಯವನ್ನು ನೋಡಿ |
ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.