Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:15 - ಕನ್ನಡ ಸತ್ಯವೇದವು J.V. (BSI)

15 ಅಷ್ಟರಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರೊಡನೆ ಯೆರೂಸಲೇವಿುಗೆ ಬಂದನು. ಅಹೀತೋಫೆಲನೂ ಅವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಬ್ಷಾಲೋಮನು ಎಲ್ಲಾ ಇಸ್ರಾಯೇಲರೊಡನೆ ಯೆರೂಸಲೇಮಿಗೆ ಬಂದನು. ಅಹೀತೋಫೇಲನೂ ಅವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಷ್ಟರಲ್ಲಿ ಅಬ್ಷಾಲೋಮನು ಎಲ್ಲ ಇಸ್ರಯೇಲರೊಡನೆ ಜೆರುಸಲೇಮಿಗೆ ಬಂದನು. ಅಹೀತೋಫೆಲನೂ ಅವನ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಬ್ಷಾಲೋಮನು, ಅಹೀತೋಫೆಲನು ಮತ್ತು ಇಸ್ರೇಲಿನ ಜನರೆಲ್ಲ ಜೆರುಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಬ್ಷಾಲೋಮನೂ, ಇಸ್ರಾಯೇಲರಾದ ಸಮಸ್ತ ಜನರೂ, ಅವನ ಸಂಗಡ ಅಹೀತೋಫೆಲನೂ ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:15
4 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಪಟ್ಟಣಕ್ಕೆ ಬಂದನು.


ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.


ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಹೋಗಬೇಕಾದ ಸ್ಥಳವನ್ನು ಸೇರಿ ಅಲ್ಲಿ ವಿಶ್ರವಿುಸಿಕೊಂಡರು.


ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಅರಸನ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು