Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:17 - ಕನ್ನಡ ಸತ್ಯವೇದವು J.V. (BSI)

17 ಅಬ್ಷಾಲೋಮನು ಅವನಿಗೆ - ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಬ್ಷಾಲೋಮನು, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಏಕೆ ಹೋಗಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಬ್ಷಾಲೋಮನು, “ನಿನ್ನ ಸ್ನೇಹಿತನಾದ ದಾವೀದನಿಗೆ ನೀನೇಕೆ ನಂಬಿಗಸ್ತನಾಗಿಲ್ಲ? ನಿನ್ನ ಸ್ನೇಹಿತನೊಡನೆ ನೀನು ಜೆರುಸಲೇಮಿನಿಂದ ಯಾಕೆ ಹೋಗಲಿಲ್ಲ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅಬ್ಷಾಲೋಮನು ಹೂಷೈಯಿಗೆ, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನ ಸಂಗಡ ಏಕೆ ಹೋಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:17
6 ತಿಳಿವುಗಳ ಹೋಲಿಕೆ  

ಇವನು ಯೆರೂಸಲೇವಿುನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು - ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ ಎಂದು ಕೇಳಲು


ಬಹುಮಂದಿ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ; ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ವಿುತ್ರನುಂಟು.


ವಿುತ್ರನ ಪ್ರೀತಿಯು ನಿರಂತರ; ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ನಡೆಯಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು [ಜನಾಂಗವನ್ನಾಗಿ] ಮಾಡಿ ಸ್ಥಾಪಿಸಿದನಲ್ಲವೇ.


ಅದಕ್ಕೆ ಹೂಷೈಯು - ಹಾಗಲ್ಲ, ಯೆಹೋವನೂ ಈ ಜನರೂ ಎಲ್ಲಾ ಇಸ್ರಾಯೇಲ್ಯರೂ ಯಾವನನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುವೆನು; ಅವನ ಬಳಿಯಲ್ಲಿ ವಾಸಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು