Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:19 - ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ನಾನು ಈಗ ಸೇವಿಸಬೇಕೆಂದಿರುವದು ರಾಜಪುತ್ರನ ಸನ್ನಿಧಿಯಲ್ಲಿಯಲ್ಲವೇ. ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವಿಸುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ, ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿಮ್ಮ ತಂದೆಯ ಸನ್ನಿಧಿಯಲ್ಲಿ ಸೇವೆಮಾಡಿದಂತೆ ನಿಮ್ಮ ಸನ್ನಿಧಿಯಲ್ಲಿ ಸೇವೆಮಾಡುವೆನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮುಂಚೆ ನಾನು ನಿನ್ನ ತಂದೆಯ ಸೇವೆ ಮಾಡಿದೆನು. ಈಗ ದಾವೀದನ ಮಗನ ಸೇವೆ ಮಾಡಬೇಕು. ನಾನು ನಿನ್ನ ಸೇವೆ ಮಾಡುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:19
7 ತಿಳಿವುಗಳ ಹೋಲಿಕೆ  

ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ - ಅರಸನೇ, ನಾನು ನಿನ್ನ ಸೇವಕನು; ಮುಂಚೆ ನಿನ್ನ ತಂದೆಯನ್ನು ಸೇವಿಸಿದಂತೆ ಈಗ ನಿನ್ನನ್ನು ಸೇವಿಸುತ್ತೇನೆ ಎಂದು ಹೇಳುವದಾದರೆ ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ನಿನಗೆ ಅನುಕೂಲವಾಗುವದು.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ಇದಲ್ಲದೆ ವಿುಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟ ಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.


ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ ಅವನ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು ಅಂದನು.


ಹೌದು, ನಿನ್ನ ದಾಸನ ಸಾಹಸವು ಗೊತ್ತಾಗುವದು ಅಂದನು. ಆಕೀಷನು ಅವನಿಗೆ - ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇವಿುಸಿಕೊಳ್ಳುವೆನು ಅಂದನು.


ಅದಕ್ಕೆ ಹೂಷೈಯು - ಹಾಗಲ್ಲ, ಯೆಹೋವನೂ ಈ ಜನರೂ ಎಲ್ಲಾ ಇಸ್ರಾಯೇಲ್ಯರೂ ಯಾವನನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುವೆನು; ಅವನ ಬಳಿಯಲ್ಲಿ ವಾಸಿಸುವೆನು.


ಅನಂತರ ಅಬ್ಷಾಲೋಮನು - ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು ಎಂಬದಾಗಿ ಅಹೀತೋಫೆಲನನ್ನು ಕೇಳಲು ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು