2 ಸಮುಯೇಲ 16:21 - ಕನ್ನಡ ಸತ್ಯವೇದವು J.V. (BSI)21 ಹೋಗಿ ನಿನ್ನ ತಂದೆಯು ಮನೆಕಾಯುವದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗವಿುಸು. ಹೀಗೆ ಮಾಡುವದಾದರೆ ನೀನು ನಿನ್ನ ತಂದೆಗೆ ಅಸಹ್ಯವಾದಿಯೆಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು, “ತಾವು ಹೋಗಿ ತಮ್ಮ ತಂದೆ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗಮಿಸಿ. ಹೀಗೆ ಮಾಡುವುದಾದರೆ, ತಾವು ತಮ್ಮ ತಂದೆಗೆ ಅಸಹ್ಯವೈರಿಯಾದಿರೆಂದು ಎಲ್ಲ ಇಸ್ರಯೇಲರಿಗೆ ತಿಳಿಯುವುದು. ಆಗ ತಮ್ಮ ಪಕ್ಷದವರು ಹುಮ್ಮಸ್ಸುಗೊಳ್ಳುವರು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಹೀತೋಫೆಲನು ಅಬ್ಷಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು ಪತ್ನಿಯರನ್ನು ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರೆಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು. ಅಧ್ಯಾಯವನ್ನು ನೋಡಿ |