Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:23 - ಕನ್ನಡ ಸತ್ಯವೇದವು J.V. (BSI)

23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟು ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:23
20 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ಸತ್ತ ನೊಣಗಳಿಂದ ಗಂದಿಗನ ತೈಲವು ಕೊಳೆತು ನಾರುವದು; ಹಾಗೆಯೇ ಹುಚ್ಚುತನ ಸ್ವಲ್ಪವಾದರೂ ಜ್ಞಾನಮಾನಗಳನ್ನು ಮುಚ್ಚಿ ಮೀರುವದು.


ನೀನು ವಾಸಿಸುವ ಮಹಾಪರಿಶುದ್ಧ ಸ್ಥಾನದ ಕಡೆಗೆ ನಾನು ಕೈಯೆತ್ತಿಕೊಂಡು ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ಯುಕ್ತಿವಂತರ ಕೈಯಿಂದ ಏನೂ ಆಗದಂತೆ ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.


ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ - ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು