2 ಸಮುಯೇಲ 16:4 - ಕನ್ನಡ ಸತ್ಯವೇದವು J.V. (BSI)4 ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಚೀಬನು, “ನಾನು ನಿನಗೆ ಸಾಷ್ಟಾಂಗನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅರಸನು ಚೀಬನಿಗೆ, “ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲವೂ ನಿನಗುಂಟಾಯಿತು,” ಎಂದನು. ಅದಕ್ಕೆ ಚೀಬನು, “ಅರಸನಾದ ನನ್ನ ಒಡೆಯನೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |