Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:5 - ಕನ್ನಡ ಸತ್ಯವೇದವು J.V. (BSI)

5 ಅರಸನಾದ ದಾವೀದನು ಬಹುರೀವಿುಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಬಹುರೀಮಿಗೆ ಬಂದನು. ಸೌಲನ ಕುಟುಂಬಕ್ಕೆ ಸೇರಿದ ಗೇರನ ಮಗನಾದ ಶಿಮ್ಮಿಯು ದಾವೀದನನ್ನು ಶಪಿಸುತ್ತಾ ಬಹುರೀಮಿನಿಂದ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನಾದ ದಾವೀದನು ಬಹುರೀಮಿನವರೆಗೂ ಬಂದಾಗ, ಸೌಲನ ಗೋತ್ರದವನಾದ ಗೇರನ ಮಗ ಶಿಮ್ಮಿ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:5
22 ತಿಳಿವುಗಳ ಹೋಲಿಕೆ  

ಆಗ ಪಲ್ಟೀಯೇಲನು ಬಹುರೀವಿುನವರೆಗೆ ಅಳುತ್ತಾ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ - ಹಿಂದಿರುಗು, ನಡೆ ಎಂದು ಹೇಳಲು ಅವನು ಹಿಂದಿರುಗಿ ಹೋದನು.


ನೀನು ಕೋಲುಹಿಡಿದು ನನ್ನ ಬಳಿಗೆ ಬರುವದೇನು? ನಾನು ನಾಯಿಯೋ ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ -


ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀವಿುಗೆ ಓಡಿ ಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು.


ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;


ಮನಸ್ಸಿನಲ್ಲಿಯೂ ರಾಜನನ್ನು ದೂಷಿಸದಿರು, ಮಲಗುವ ಮನೆಯಲ್ಲಿಯೂ ಧನಿಕನನ್ನು ಬಯ್ಯದಿರು; ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸೀತು; ಪಕ್ಷಿಯು ಆ ವಿಷಯವನ್ನು ತಿಳಿಸೀತು.


ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ನಿವಿುತ್ತವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.


ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.


ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ.


ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಹೋಗಬೇಕಾದ ಸ್ಥಳವನ್ನು ಸೇರಿ ಅಲ್ಲಿ ವಿಶ್ರವಿುಸಿಕೊಂಡರು.


ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು.


ಅವನು ದಾವೀದನಿಗೂ ಅವನ ಎಲ್ಲಾ ಸೇವಕರಿಗೂ ಎಡಬಲದಲ್ಲಿರುವ ಸೈನಿಕರಿಗೂ ಶೂರರಿಗೂ ಕಲ್ಲೆಸೆಯ ತೊಡಗಿದನು.


ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.


ಅವನಿಗೆ ಬೇರೆ ಯಾವ ಹೊದಿಕೆಯಿಲ್ಲವಲ್ಲಾ; ಅದನ್ನೇ ಮೈಗೆ ಕಟ್ಟಿಕೊಳ್ಳಬೇಕು; ಬೇರೆ ಯಾವದನ್ನು ಸುತ್ತಿಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕೇಳುವೆನು; ನಾನು ದಯಾಪರನೇ.


ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್,


ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬೊಬ್ಬ ಯೆಹೂದಿ ಮನುಷ್ಯನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್‍ಕುಲದ ಕೀಷನ ಮರಿಮಗನೂ ಶಿಮ್ಗೀಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.


ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು