Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:22 - ಕನ್ನಡ ಸತ್ಯವೇದವು J.V. (BSI)

22 ಆಗ ದಾವೀದನೂ ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್‍ಹೊಳೆಯನ್ನು ದಾಟಿದರು. ಉದಯವಾದಾಗ ದಾಟಬೇಕಾದವನೊಬ್ಬನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ದಾವೀದನೂ ಅವನ ಜೊತೆಯಲ್ಲಿದ್ದವರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಉದಯವಾದಾಗ ದಾಟಬೇಕಾದವನೊಬ್ಬನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದಾವೀದನು ಮತ್ತು ಅವನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋದರು. ಸೂರ್ಯನು ಮೇಲೇರುವುದಕ್ಕೆ ಮುಂಚೆಯೇ, ದಾವೀದನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾದಾಗ ದಾಟಬೇಕಾದವರು ಒಬ್ಬರಾದರೂ ಉಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:22
8 ತಿಳಿವುಗಳ ಹೋಲಿಕೆ  

ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ಹೀಗೆ ನೆರವೇರಿತು.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ದಾವೀದನು ಮಹನಯಿವಿುಗೆ ಹೋದನು. ಇಸ್ರಾಯೇಲ್ಯರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಯೊರ್ದನ್‍ಹೊಳೆ ದಾಟಿದನು.


ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.


ಅವರು ಹೋದಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ - ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ; ಆದದರಿಂದ ಬೇಗನೆ ಎದ್ದು ಹೊಳೆದಾಟಿ ಹೋಗು ಎಂದು ಹೇಳಿದರು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೊನ್ ಪರ್ವತ, ವಿುಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು