Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:29 - ಕನ್ನಡ ಸತ್ಯವೇದವು J.V. (BSI)

29 ಬೆಣ್ಣೆ ಕುರಿ ಹಸುವಿನ ಗಿಣ್ಣು ಇವುಗಳನ್ನೂ ತಂದು ಕೊಟ್ಟರು. ಜನರು ಅರಣ್ಯಪ್ರಯಾಣದಿಂದ ಹಸಿದವರೂ ದಣಿದವರೂ ಬಾಯಾರಿದವರೂ ಆಗಿದ್ದಾರೆ ಅಂದುಕೊಂಡು ಇವುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವರೆ, ಅಲಸಂದೆ, ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿಗಿಣ್ಣು, ಹಸುವಿನ ಗಿಣ್ಣು, ಇವುಗಳನ್ನೂ ತಂದುಕೊಟ್ಟರು. ‘ಜನರು ಮರಳುಗಾಡಿನ ಪ್ರಯಾಣದಿಂದ ಹಸಿದಿದ್ದಾರೆ, ದಣಿದಿದ್ದಾರೆ ಹಾಗು ಬಾಯಾರಿದ್ದಾರೆ’ ಎಂಬ ಭಾವನೆಯಿಂದ ಇವುಗಳನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:29
15 ತಿಳಿವುಗಳ ಹೋಲಿಕೆ  

ಅರಸನು ಚೀಬನನ್ನು - ಇವುಗಳನ್ನು ಯಾಕೆ ತಂದಿ ಎಂದು ಕೇಳಲು ಅವನು - ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವದಕ್ಕಾಗಿಯೂ ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನುವದಕ್ಕಾಗಿಯೂ ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕಾಗಿಯೂ ತಂದಿದ್ದೇನೆ ಎಂದು ಉತ್ತರಕೊಟ್ಟನು.


ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾದೇಶದವರೇ, ಓಡಿಹೋದವರನ್ನು ಅನ್ನದೊಡನೆ ಎದುರುಗೊಳ್ಳಿರಿ.


ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಹೋಗಬೇಕಾದ ಸ್ಥಳವನ್ನು ಸೇರಿ ಅಲ್ಲಿ ವಿಶ್ರವಿುಸಿಕೊಂಡರು.


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಆತನಿಗೆ ಕೊಟ್ಟು ಉಪಚಾರಮಾಡುತ್ತಿದ್ದರು.


ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗುವರು.


ಇದಲ್ಲದೆ ಇಲ್ಲಿ ಹತ್ತು ಗಿಣ್ಣಿನ ಗಡ್ಡೆಗಳಿರುತ್ತವೆ; ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.


ಹಸಿವೆನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು