Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:11 - ಕನ್ನಡ ಸತ್ಯವೇದವು J.V. (BSI)

11 ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ರೂಪಾಯಿಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೋವಾಬನು, “ನೀನು ಕಂಡಕೂಡಲೆ ಏಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ, ನಾನೇ ನಿನಗೆ ಹತ್ತು ಬೆಳ್ಳಿನಾಣ್ಯಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋವಾಬನು ಆ ಮನುಷ್ಯನಿಗೆ, “ನೀನು ಅವನನ್ನು ಕೊಂದು ನೆಲಕ್ಕುರುಳಿಸಲಿಲ್ಲವೇಕೆ? ನಾನು ನಿನಗೆ ಒಂದು ಸೊಂಟಪಟ್ಟಿಯನ್ನು ಮತ್ತು ಹತ್ತು ಬೆಳ್ಳಿರೂಪಾಯಿಗಳನ್ನು ಕೊಡುತ್ತಿದ್ದೆನಲ್ಲ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:11
5 ತಿಳಿವುಗಳ ಹೋಲಿಕೆ  

ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ - ಅಗೋ, ಆ ಏಲಾಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವದನ್ನು ಕಂಡೆನು ಎಂದು ಹೇಳಲು ಯೋವಾಬನು ಅವನಿಗೆ -


ಅದಕ್ಕೆ ಆ ಮನುಷ್ಯನು - ನೀನು ನನ್ನ ಕೈಯಲ್ಲಿ ಸಾವಿರ ರೂಪಾಯಿಗಳನ್ನಿಟ್ಟರೂ ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ ಅಬೀಷೈಗೂ ಇತ್ತೈಗೂ - ಜಾಗರೂಕತೆಯಿಂದಿರ್ರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು ಎಂದು ಆಜ್ಞಾಪಿಸಿದನಲ್ಲವೋ?


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.


ಸೂರೆಮಾಡುವವರೆಲ್ಲರ ದಾರಿಯೂ ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು