Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:20 - ಕನ್ನಡ ಸತ್ಯವೇದವು J.V. (BSI)

20 ಯೋವಾಬನು ಅವನಿಗೆ - ಈಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈಹೊತ್ತು ಅರಸನ ಮಗನು ಸತ್ತಿರುವದರಿಂದ ವರ್ತಮಾನವು ಶುಭವಾದದ್ದಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೋವಾಬನು, “ಆ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈ ಹೊತ್ತು ಅರಸರ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದ್ದಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋವಾಬನು ಅಹೀಮಾಚನಿಗೆ, “ಇಲ್ಲ, ದಾವೀದನಿಗೆ ಇಂದು ನೀನು ಈ ವರ್ತಮಾನವನ್ನು ತಿಳಿಸುವಂತಿಲ್ಲ. ನೀನು ಬೇರೊಂದು ದಿನದಲ್ಲಿ ವರ್ತಮಾನವನ್ನು ತಿಳಿಸಬಹುದು, ಏಕೆಂದರೆ ಇಂದು ರಾಜನ ಮಗನು ಸತ್ತಿದ್ದಾನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:20
8 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ಆಗ ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಿದನು. ಅದಕ್ಕೆ ಅಹೀಮಾಚನು ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು. ಆದರೆ ಸಂಗತಿಯೇನೆಂಬದು ನನಗೆ ಗೊತ್ತಾಗಲಿಲ್ಲ ಎಂದು ಉತ್ತರಕೊಟ್ಟನು.


ಕಾವಲುಗಾರನು - ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ ಎಂದನು. ಅದಕ್ಕೆ ಅರಸನು - ಅವನು ಒಳ್ಳೆಯವನು; ಶುಭವರ್ತಮಾನತರುವವನು ಅಂದನು.


ಅರಸನು ಯೋವಾಬ್ ಅಬೀಷೈ ಇತ್ತೈ ಎಂಬವರಿಗೆ - ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ - ಅಪ್ಪಣೆಯಾಗಲಿ, ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭವರ್ತಮಾನವನ್ನು ತಿಳಿಸುವೆನು ಅನ್ನಲು


ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ - ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟಹೋದನು.


ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು