2 ಸಮುಯೇಲ 18:22 - ಕನ್ನಡ ಸತ್ಯವೇದವು J.V. (BSI)22 ಚಾದೋಕನ ಮಗನಾದ ಅಹೀಮಾಚನು ತಿರಿಗಿ ಯೋವಾಬನಿಗೆ - ಆಗುವದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವದಕ್ಕೆ ನನಗೆ ಅಪ್ಪಣೆಕೊಡು ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು - ಮಗನೇ, ಯಾಕೆ ಹೋಗಬೇಕನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವದಿಲ್ಲವಲ್ಲಾ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಚಾದೋಕನ ಮಗ ಅಹೀಮಾಚನು ಪುನಃ ಯೋವಾಬನಿಗೆ, “ಆಗುವುದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಿ,” ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು, “ಮಗೂ, ಏಕೆ ಹೋಗಬೇಕೆನ್ನುತ್ತಿ? ಅದಕ್ಕಾಗಿ ನಿನಗೆ ಬಹುಮಾನವೇನೂ ಸಿಕ್ಕುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಚಾದೋಕನ ಮಗನಾದ ಅಹೀಮಾಚನು ಯೋವಾಬನನ್ನು ಮತ್ತೆ ಬೇಡುತ್ತಾ, “ಏನು ಸಂಭವಿಸುತ್ತದೆಯೊ ಸಂಭವಿಸಲಿ, ಇಥಿಯೋಪ್ಯದವನ ಹಿಂದೆ ಓಡಿಹೋಗಲು ನನಗೆ ಅವಕಾಶಕೊಡು!” ಎಂದನು. ಯೋವಾಬನು, “ಮಗನೇ, ಈ ವರ್ತಮಾನವನ್ನು ತೆಗೆದುಕೊಂಡು ಹೋಗಲು ನೀನು ಏಕೆ ಇಚ್ಛಿಸುವೆ? ನೀನು ತೆಗೆದುಕೊಂಡು ಹೋಗುವ ವರ್ತಮಾನಕ್ಕೆ ನಿನಗೆ ಯಾವ ಬಹುಮಾನವೂ ಸಿಕ್ಕುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿ |