Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:23 - ಕನ್ನಡ ಸತ್ಯವೇದವು J.V. (BSI)

23 ಆದರೆ ಅಹೀಮಾಚನು ತಿರಿಗಿ - ಚಿಂತೆಯಿಲ್ಲ, ನನ್ನನ್ನೂ ಕಳುಹಿಸು ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು ಹೋಗು ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಅಹೀಮಾಚನು ಮತ್ತೊಮ್ಮೆ, “ಚಿಂತೆಯಿಲ್ಲ, ನನ್ನನ್ನೂ ಕಳುಹಿಸಿ,” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು, “ಹೋಗು,” ಎಂದು ಹೇಳಿದನು. ಆಗ ಅಹೀಮಾಚನು ಜೋರ್ಡನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು‍.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಹೀಮಾಚನು, “ಏನಾದರೂ ಆಗಲಿ, ನಾನು ಓಡಿಹೋಗುತ್ತೇನೆ” ಎಂದು ಉತ್ತರಿಸಿದನು. “ಓಡು” ಎಂದು ಯೋವಾಬನು ಅಹೀಮಾಚನಿಗೆ ಹೇಳಿದನು. ಆಗ ಅಹೀಮಾಚನು ಜೋರ್ಡನ್ ಕಣಿವೆಯ ಮೂಲಕ ಓಡಿಹೋದನು. ಅವನು ಇಥಿಯೋಪ್ಯದವನಿಗಿಂತ ಮೊದಲೇ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:23
4 ತಿಳಿವುಗಳ ಹೋಲಿಕೆ  

ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲೇ ಸಮಾಧಿಗೆ ಮುಟ್ಟಿ


ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ - ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟಹೋದನು.


ಚಾದೋಕನ ಮಗನಾದ ಅಹೀಮಾಚನು ತಿರಿಗಿ ಯೋವಾಬನಿಗೆ - ಆಗುವದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವದಕ್ಕೆ ನನಗೆ ಅಪ್ಪಣೆಕೊಡು ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು - ಮಗನೇ, ಯಾಕೆ ಹೋಗಬೇಕನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವದಿಲ್ಲವಲ್ಲಾ ಅಂದನು.


ದಾವೀದನು ಎರಡು ಬಾಗಲುಗಳ ಮಧ್ಯದಲ್ಲಿ ಕೂತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು