2 ಸಮುಯೇಲ 18:26 - ಕನ್ನಡ ಸತ್ಯವೇದವು J.V. (BSI)26 ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ - ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ದಾನೆ ಎಂದು ಅರಸನಿಗೆ ತಿಳಿಸಿದನು. ಅರಸನು - ಹಾಗಾದರೆ ಅವನೂ ಸಮಾಚಾರ ತರುವವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ಪಾನೆ,” ಎಂದು ಅರಸನಿಗೆ ತಿಳಿಸಿದನು. ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅವನ ಹಿಂದೆ ಇನ್ನೊಬ್ಬ ಮನುಷ್ಯನು ಓಡಿಬರುತ್ತಿರುವುದನ್ನು ಕಾವಲುಗಾರನು ನೋಡಿದನು. ಕಾವಲುಗಾರನು ದ್ವಾರಪಾಲಕನನ್ನು ಕರೆದು, “ನೋಡು! ಇನ್ನೊಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡುತ್ತಾ ಬರುತ್ತಿದ್ದಾನೆ” ಎಂದನು. ರಾಜನು, “ಅವನು ಸಹ ಸುದ್ದಿಯನ್ನು ತರುತ್ತಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು. ಅಧ್ಯಾಯವನ್ನು ನೋಡಿ |