2 ಸಮುಯೇಲ 18:28 - ಕನ್ನಡ ಸತ್ಯವೇದವು J.V. (BSI)28 ಅಹೀಮಾಚನು ಹತ್ತಿರ ಬಂದು ಅರಸನಿಗೆ ಶುಭವಾಗಲಿ ಎಂದು ಹೇಳಿ ಸಾಷ್ಟಾಂಗನಮಸ್ಕಾರಮಾಡಿ - ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು. ಅಧ್ಯಾಯವನ್ನು ನೋಡಿ |