2 ಸಮುಯೇಲ 18:9 - ಕನ್ನಡ ಸತ್ಯವೇದವು J.V. (BSI)9 ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು. ಅಧ್ಯಾಯವನ್ನು ನೋಡಿ |