Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:1 - ಕನ್ನಡ ಸತ್ಯವೇದವು J.V. (BSI)

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ಸಮಾಚಾರ ಯೋವಾಬನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಸುದ್ದಿಯನ್ನು ಜನರು ಯೋವಾಬನಿಗೆ ತಿಳಿಸಿದರು. ಅವರು ಯೋವಾಬನಿಗೆ, “ನೋಡು, ರಾಜನು ಅಳುತ್ತಿದ್ದಾನೆ ಮತ್ತು ಅಬ್ಷಾಲೋಮನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:1
9 ತಿಳಿವುಗಳ ಹೋಲಿಕೆ  

ಆಗ ಯೋವಾಬನು - ಇಲ್ಲಿ ನಿಂತು ತಡ ಮಾಡುವದೇಕೆ ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ


ಅರಸನು ಯೋವಾಬ್ ಅಬೀಷೈ ಇತ್ತೈ ಎಂಬವರಿಗೆ - ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.


ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ಯೋವಾಬನು ಅವನಿಗೆ - ಈಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈಹೊತ್ತು ಅರಸನ ಮಗನು ಸತ್ತಿರುವದರಿಂದ ವರ್ತಮಾನವು ಶುಭವಾದದ್ದಲ್ಲ ಎಂದು ಹೇಳಿ


ಅದಕ್ಕೆ ಆ ಮನುಷ್ಯನು - ನೀನು ನನ್ನ ಕೈಯಲ್ಲಿ ಸಾವಿರ ರೂಪಾಯಿಗಳನ್ನಿಟ್ಟರೂ ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ ಅಬೀಷೈಗೂ ಇತ್ತೈಗೂ - ಜಾಗರೂಕತೆಯಿಂದಿರ್ರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು ಎಂದು ಆಜ್ಞಾಪಿಸಿದನಲ್ಲವೋ?


ಅರಸನು ಮಗನಿಗೋಸ್ಕರ ಪ್ರಲಾಪಿಸುತ್ತಿದ್ದಾನೆಂಬದು ಎಲ್ಲಾ ಜನರಿಗೂ ಗೊತ್ತಾದದರಿಂದ ಅವರ ಜಯಘೋಷವು ಗೋಳಾಟವಾಯಿತು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು