Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:13 - ಕನ್ನಡ ಸತ್ಯವೇದವು J.V. (BSI)

13 ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಲ್ಲದೆ ಅಮಾಸನಿಗೆ, ‘ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದೆ ಹೋದರೆ, ದೇವರು ನನ್ನನ್ನು ದಂಡಿಸಲಿ’ ಎಂದು ಹೇಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:13
13 ತಿಳಿವುಗಳ ಹೋಲಿಕೆ  

ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇವಿುಸಿದನು. ಇಸ್ರಾಯೇಲ್ಯನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬವಳನ್ನು ಕೂಡಿದ್ದರಿಂದ ಈ ಅಮಾಸನು ಹುಟ್ಟಿದನು.


ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.


ಚೆರೂಯಳ ಮಗನಾದ ಯೋವಾಬನು ಅವನ ಸೇನಾಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.


ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.


ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ರೂಪಾಯಿಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು ಅಂದನು.


ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಅನಂತರ ಇಸ್ರಾಯೇಲ್ಯರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ -


ಅನಂತರ ಅರಸನು ಅಮಾಸನಿಗೆ - ನೀನು ಮೂರು ದಿನಗಳೊಳಗಾಗಿ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು