Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:21 - ಕನ್ನಡ ಸತ್ಯವೇದವು J.V. (BSI)

21 ಚೆರೂಯಳ ಮಗನಾದ ಅಬೀಷೈಯು - ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಚೆರೂಯಳ ಮಗನಾದ ಅಬೀಷೈಯನು, “ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅಪೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:21
10 ತಿಳಿವುಗಳ ಹೋಲಿಕೆ  

ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.


ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲೆಸೆಯುತ್ತಾ ಧೂಳೆರಚುತ್ತಾ ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.


ಅರಸನಾದ ದಾವೀದನು ಬಹುರೀವಿುಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಅವನು ತನ್ನ ಜನರಿಗೆ - ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ಒಡೆಯನೂ ಆಗಿದ್ದಾನೆ; ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿಮಾಡಲಿ ಎಂದು ಹೇಳಿದನು.


ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ - ಈ ಸತ್ತ ನಾಯಿ ಅರಸನಾದ ನನ್ನ ಒಡೆಯನನ್ನು ಶಪಿಸುವದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೆ ಹೋಗಿ ಅವನ ತಲೆ ಹಾರಿಸಿಕೊಂಡು ಬರುವೆನು ಅಂದನು.


ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು