Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:24 - ಕನ್ನಡ ಸತ್ಯವೇದವು J.V. (BSI)

24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವದಕ್ಕೆ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಕಾಲುಗಳನ್ನು ಕಟ್ಟಿಕೊಂಡಿದ್ದಿಲ್ಲ, ಮೀಸೆಯನ್ನು ಕತ್ತರಿಸಿದ್ದಿಲ್ಲ, ಬಟ್ಟೆಗಳನ್ನು ಒಗೆಸಿಕೊಂಡಿದ್ದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:24
12 ತಿಳಿವುಗಳ ಹೋಲಿಕೆ  

ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಅರಸನು ತಿರಿಗಿ ಅವನನ್ನು - ನಿನ್ನ ಯಜಮಾನನ ಮಗನು ಎಲ್ಲಿದ್ದಾನೆಂದು ಕೇಳಲು ಅವನು - ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲ್ಯರು ಈಹೊತ್ತು ತನಗೆ ತಿರಿಗಿ ಕೊಡುವರೆಂದು ಹೇಳಿ ಅವನು ಯೆರೂಸಲೇವಿುನಲ್ಲೇ ಉಳುಕೊಂಡನು ಅಂದನು.


ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಚೀಬನು ಅರಸನಿಗೆ - ಒಡೆಯನಾದ ಅರಸನ ಅಪ್ಪಣೆಯಂತೆ ಸೇವಕನು ನಡೆಯುವನು ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.


ಆಗ ದಾವೀದನು ನೆಲದಿಂದೆದ್ದು ಸ್ನಾನಮಾಡಿ ತೈಲ ಹಚ್ಚಿಕೊಂಡು ತನ್ನ ಬಟ್ಟೆಗಳನ್ನು ಬದಲಿಸಿ ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರತರಿಸಿ ಊಟಮಾಡಿದನು.


ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮಿಯು ನಿನ್ನ ಬಳಿಯಲ್ಲಿರುತ್ತಾನಲ್ಲಾ; ನಾನು ಮಹನಯಿವಿುಗೆ ಹೋದಾಗ ಅವನು ನನ್ನನ್ನು ಬಹುಕ್ರೂರವಾಗಿ ಶಪಿಸಿದನು; ಅವನು ನನ್ನನ್ನು ಎದುರುಗೊಳ್ಳುವದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ - ನಿನ್ನನ್ನು ಕೊಲ್ಲುವದಿಲ್ಲ ಎಂಬದಾಗಿ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು