Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:27 - ಕನ್ನಡ ಸತ್ಯವೇದವು J.V. (BSI)

27 ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ, ತನಗೆ ಸರಿಕಂಡದ್ದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ಹಾಗೆ ಮಾಡದೆ ನನ್ನ ಒಡೆಯರಾದ ಅರಸರ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದ. ಅರಸರು ದೇವದೂತನ ಹಾಗಿರುತ್ತೀರಿ. ತಮಗೆ ಸರಿಕಂಡದ್ದನ್ನು ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ನನ್ನ ಸೇವಕನು ನನ್ನನ್ನು ಮೋಸಗೊಳಿಸಿದನು. ಅವನು ನನ್ನ ಬಗ್ಗೆ ನಿನಗೆ ಕೆಟ್ಟದ್ದನ್ನು ಹೇಳಿದನು. ಆದರೆ ರಾಜನಾದ ನನ್ನ ಒಡೆಯನು ದೇವದೂತನಂತಿದ್ದಾನೆ. ನಿನಗೆ ಒಳ್ಳೆಯದೆಂದು ತೋರಿದ್ದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:27
12 ತಿಳಿವುಗಳ ಹೋಲಿಕೆ  

ಅಬ್ಷಾಲೋಮನ ವಿಷಯವನ್ನು ರೂಪಾಂತರಪಡಿಸುವದಕ್ಕೋಸ್ಕರ ನಿನ್ನ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯನು ದೇವದೂತನಂಥ ಜ್ಞಾನಿಯು; ಅವನು ಭೂಲೋಕದಲ್ಲಿ ನಡೆಯುವದನ್ನೆಲ್ಲಾ ತಿಳುಕೊಳ್ಳುವನು ಎಂದು ಉತ್ತರಕೊಟ್ಟಳು.


ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿರುತ್ತಾನೆ; ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ ಅಂದಳು.


ಅರಸನು ತಿರಿಗಿ ಅವನನ್ನು - ನಿನ್ನ ಯಜಮಾನನ ಮಗನು ಎಲ್ಲಿದ್ದಾನೆಂದು ಕೇಳಲು ಅವನು - ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲ್ಯರು ಈಹೊತ್ತು ತನಗೆ ತಿರಿಗಿ ಕೊಡುವರೆಂದು ಹೇಳಿ ಅವನು ಯೆರೂಸಲೇವಿುನಲ್ಲೇ ಉಳುಕೊಂಡನು ಅಂದನು.


ಆಗ ಆಕೀಷನು ದಾವೀದನಿಗೆ - ನೀನು ಒಳ್ಳೆಯವನೆಂದು ನನಗೆ ಗೊತ್ತದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ; ಆದರೆ ಫಿಲಿಷ್ಟಿಯಪ್ರಭುಗಳು - ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದೆಂದು ಹೇಳುತ್ತಾರಲ್ಲಾ;


ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವದಿಲ್ಲ.


ಅವನು ಚಾಡಿಯನ್ನು ಹೇಳದವನೂ ಮತ್ತೊಬ್ಬರಿಗೆ ಅನ್ಯಾಯಮಾಡದವನೂ ಯಾರನ್ನೂ ನಿಂದಿಸದವನೂ ಆಗಿರಬೇಕು.


ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು.


ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತುಮಂದಿ ಸೇವಕರನ್ನೂ ಕರಕೊಂಡು ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು


ಅರಸನು ಅವನಿಗೆ - ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ ಅಂದನು. ಆಗ ಚೀಬನು ಅರಸನಿಗೆ - ಯೋನಾತಾನನಿಗೆ ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ ಎಂದು ಹೇಳಿದನು.


ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದದರಿಂದ ಅವನು ಯೆರೂಸಲೇವಿುನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು