2 ಸಮುಯೇಲ 19:28 - ಕನ್ನಡ ಸತ್ಯವೇದವು J.V. (BSI)28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು. ಅಧ್ಯಾಯವನ್ನು ನೋಡಿ |