Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:32 - ಕನ್ನಡ ಸತ್ಯವೇದವು J.V. (BSI)

32 ಇವನು ಎಂಭತ್ತು ವರುಷದ ಮುದುಕನು. ಇವನು ಬಹುಶ್ರೀಮಂತನಾಗಿದ್ದದರಿಂದ ದಾವೀದನು ಮಹನಯಿವಿುನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಬರ್ಜಿಲ್ಲೈಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:32
14 ತಿಳಿವುಗಳ ಹೋಲಿಕೆ  

ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;


ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ಮೋಶೆ ಸಾಯುವಾಗ ನೂರಿಪ್ಪತ್ತು ವರುಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರುಷ ಇದ್ದನು. ಅವನ ಜೀವಿತಕಾಲವು ಒಟ್ಟಿಗೆ ನೂರ ನಾಲ್ವತ್ತೇಳು ವರುಷಗಳು.


ಅಬ್ರಹಾಮನು ನೂರೆಪ್ಪತ್ತೈದು ವರುಷ ಬದುಕಿದನು.


ಅವನು ಒಟ್ಟು ಒಂಭೈನೂರೈವತ್ತು ವರುಷ ಬದುಕಿ ಸತ್ತನು.


ಅವನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷ ಬದುಕಿ ಸತ್ತನು.


ಯೋಸೇಫನು ನೂರಹತ್ತು ವರುಷದವನಾಗಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.


ಅರಸನು ಬರ್ಜಿಲ್ಲೈಗೆ - ನನ್ನ ಜೊತೆಯಲ್ಲಿ ಹೊಳೆಯ ಆಚೆಗೆ ಬಾ; ನಾನು ಯೆರೂಸಲೇವಿುನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ ಅಂದನು.


ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವದಕ್ಕಾಗಿ ಇಸ್ರಾಯೇಲ್ಯರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ತೆಗೆದುಕೊಂಡನು. ಆ ಹಣವು ಸಿಕ್ಕಿದನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು