2 ಸಮುಯೇಲ 19:35 - ಕನ್ನಡ ಸತ್ಯವೇದವು J.V. (BSI)35 ಈಗ ನಾನು ಎಂಭತ್ತು ವರುಷದವನು. ಒಳ್ಳೇದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಸುಮ್ಮನೆ ಯಾಕೆ ಭಾರವಾಗಿರಬೇಕು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು ಕೆಟ್ಟದು ಇವುಗಳ ಭೇದ ನನಗಿನ್ನು ತಿಳಿಯುವುದೇ? ನಿಮ್ಮ ಸೇವಕನಾದ ನನಗೆ ಇನ್ನು ಅನ್ನಪಾನಗಳ ರುಚಿ ಗೊತ್ತಾಗುವುದೇ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೆಯೇ? ನಾನು ನನ್ನ ಒಡೆಯರಾದ ಅರಸರಿಗೆ ಸುಮ್ಮನೆ ಏಕೆ ಹೊರೆಯಾಗಿರಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನನಗೀಗ ಎಂಭತ್ತು ವರ್ಷ. ಒಳಿತು ಕೆಡುಕುಗಳಿಗಿರುವ ವ್ಯತ್ಯಾಸ ಈಗ ನನಗೆ ತಿಳಿಯುವುದಿಲ್ಲ. ನಾನು ತಿನ್ನುವ ಇಲ್ಲವೆ ಕುಡಿಯುವ ವಸ್ತುಗಳ ರುಚಿಯೂ ನನಗೆ ಗೊತ್ತಾಗುವುದಿಲ್ಲ. ಹಾಡುತ್ತಿರುವ ಗಂಡಸರ ಮತ್ತು ಹೆಂಗಸರ ಯಾವುದೇ ಧ್ವನಿಯೂ ನನಗೆ ಕೇಳಿಸುವುದಿಲ್ಲ. ನನ್ನ ಒಡೆಯನಾದ ರಾಜನಿಗೆ ನಾನೇಕೆ ಭಾರವಾಗಬೇಕು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು? ಅಧ್ಯಾಯವನ್ನು ನೋಡಿ |