2 ಸಮುಯೇಲ 19:37 - ಕನ್ನಡ ಸತ್ಯವೇದವು J.V. (BSI)37 ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರಕೊಂಡುಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ದಯವಿಟ್ಟು ನಿಮ್ಮ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ, ಇಲ್ಲಿ ನಿಮ್ಮ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯರಾದ ಅರಸರು ಇವನನ್ನು ಕರೆದುಕೊಂಡು ಹೋಗಿ ತಮ್ಮ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆದರೆ ದಯವಿಟ್ಟು ನನ್ನನ್ನು ಹಿಂದಿರುಗಲು ಬಿಡು. ನಂತರ ನಾನು ನನ್ನ ಸ್ವಂತ ಸ್ಥಳದಲ್ಲಿ ಸಾಯುತ್ತೇನೆ. ನನ್ನ ತಂದೆತಾಯಿಗಳನ್ನು ಸಮಾಧಿ ಮಾಡಿದ ಸ್ಮಶಾನದಲ್ಲಿಯೇ ನನ್ನನ್ನು ಸಮಾಧಿ ಮಾಡಲಿ. ಆದರೆ ನನ್ನ ಒಡೆಯನಾದ ರಾಜನೇ, ಇಲ್ಲಿರುವ ಕಿಮ್ಹಾಮನು ನಿನ್ನ ಸೇವಕನಾಗಿರುತ್ತಾನೆ; ಅವನು ನಿನ್ನೊಂದಿಗೆ ಬರುತ್ತಾನೆ. ನಿನಗೆ ಇಷ್ಟಬಂದಂತೆ ಅವನಿಗೆ ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು. ಅಧ್ಯಾಯವನ್ನು ನೋಡಿ |