Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:43 - ಕನ್ನಡ ಸತ್ಯವೇದವು J.V. (BSI)

43 ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:43
23 ತಿಳಿವುಗಳ ಹೋಲಿಕೆ  

ಕಕ್ಷಭೇದ ಭಿನ್ನಮತ ಮತ್ಸರ ಕುಡಿಕತನ ದುಂದೌತಣ ಇಂಥವುಗಳೇ.


ಅನಂತರ ಇಸ್ರಾಯೇಲ್ಯರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ -


ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಅಹಂಕಾರಿಗಳೂ ಒಬ್ಬರನ್ನೊಬ್ಬರು ಕೆಣಕುವವರೂ ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ಹರಕೊಂಡು ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ನೋಡಿರಿ.


ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.


ಅನ್ಯಾಯಹೊಂದಿದ ಸಹೋದರನು ಬಲವಾದ ಪಟ್ಟಣಕ್ಕಿಂತಲೂ ಅಸಾಧ್ಯ; ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ನೋಡಿ ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ - ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿಕಳುಹಿಸಿದರು.


ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಾಯೆಲ್‍ಕುಲಗಳಲ್ಲೆಲ್ಲಾ ಜನರು ತಮ್ಮ ತಮ್ಮೊಳಗೆ ಜಗಳವಾಡಿ - ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.


ಯೆಹೋವನು ಅವನಿಗೂ ಶೆಕೆವಿುನ ಹಿರಿಯರಿಗೂ ವೈಮನಸ್ಯ ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.


ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ - ನೀನು ಹೀಗೆ ಯಾಕೆ ಮಾಡಿದಿ? ವಿುದ್ಯಾನ್ಯರೊಡನೆ ಯುದ್ಧಮಾಡುವದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ ಎಂದು ಉಗ್ರದಿಂದ ಕಲಹಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು