Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:5 - ಕನ್ನಡ ಸತ್ಯವೇದವು J.V. (BSI)

5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ - ನಿನ್ನನ್ನೂ ನಿನ್ನ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೇವಕರನ್ನು ಈಹೊತ್ತು ಅಪಮಾನಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೋವಾಬನು ಅರಸನ ಬಳಿಗೆ ಹೋಗಿ, “ನಿಮ್ಮನ್ನೂ ನಿಮ್ಮ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿಮ್ಮ ಸೇವಕರನ್ನು ಈ ದಿನ ಅಪಮಾನಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:5
9 ತಿಳಿವುಗಳ ಹೋಲಿಕೆ  

ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ.


ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಅರಸನು ತನ್ನ ಮೋರೆಯನ್ನು ಮುಚ್ಚಿಕೊಂಡು - ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಬಹಳವಾಗಿ ಗೋಳಾಡಿದನು.


ನೀನು ಶತ್ರುಗಳನ್ನು ಪ್ರೀತಿಸುವವನೂ ವಿುತ್ರರನ್ನು ದ್ವೇಷಿಸುವವನೂ ಆಗಿದ್ದೀ; ನೀನು ನಿನ್ನ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟಿ. ಇದರಿಂದ ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ದಾವೀದನು ಮೋರೆಯನ್ನು ಮುಚ್ಚಿಕೊಂಡು ಅಳುತ್ತಾ ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ಬಲುದೊಡ್ಡ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು