Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:6 - ಕನ್ನಡ ಸತ್ಯವೇದವು J.V. (BSI)

6 ನೀನು ಶತ್ರುಗಳನ್ನು ಪ್ರೀತಿಸುವವನೂ ವಿುತ್ರರನ್ನು ದ್ವೇಷಿಸುವವನೂ ಆಗಿದ್ದೀ; ನೀನು ನಿನ್ನ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟಿ. ಇದರಿಂದ ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಶತ್ರುಗಳನ್ನು ಪ್ರೀತಿಸುವವರೂ ಮಿತ್ರರನ್ನು ದ್ವೇಷಿಸುವವರೂ ಆಗಿದ್ದೀರಿ; ನೀವು ನಿಮ್ಮ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವರಲ್ಲವೆಂದು ಈಗ ತೋರಿಸಿಕೊಟ್ಟಿರಿ. ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿಮಗೆ ಸಂತೋಷವಾಗುತ್ತಿತ್ತೆಂದು ಇದರಿಂದ ತಿಳಿಯಬೇಕಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸುವೆ; ನಿನ್ನನ್ನು ಪ್ರೀತಿಸುವ ಜನರನ್ನು ನೀನು ದ್ವೇಷಿಸುವೆ. ಆದ್ದರಿಂದ ನಿನ್ನ ಸೇವಕರು ಅವಮಾನಿತರಾಗಿದ್ದಾರೆ. ನಿನ್ನ ಅಧಿಕಾರಿಗಳು ಮತ್ತು ನಿನ್ನ ಜನರು ನಿನಗೆ ಮುಖ್ಯವಲ್ಲ ಎಂಬುದನ್ನು ನೀನಿಂದು ರುಜುವಾತುಪಡಿಸಿದೆ. ಇಂದು ಅಬ್ಷಾಲೋಮನು ಬದುಕಿದ್ದು, ನಾವೆಲ್ಲರೂ ಸತ್ತಿದ್ದರೆ, ನೀನು ಬಹಳ ಹರ್ಷಗೊಳುತ್ತಿದ್ದೆ ಎಂಬುದನ್ನು ನಾನು ಈ ದಿನ ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:6
6 ತಿಳಿವುಗಳ ಹೋಲಿಕೆ  

ಪೌಲನು - ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ ಅಂದನು.


ಆತನು ರಾಜನಿಗೆ - ನೀನು ಮೂರ್ಖ, ಪ್ರಭುಗಳಿಗೆ - ನೀವು ಕೆಟ್ಟವರು ಎಂದು ಹೇಳಬಲ್ಲನು.


ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ - ನಿನ್ನನ್ನೂ ನಿನ್ನ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೇವಕರನ್ನು ಈಹೊತ್ತು ಅಪಮಾನಪಡಿಸಿದಿ.


ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯಾಭಾವದಿಂದ ಮಾತಾಡಿಸು; ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನಕಾಲದಿಂದ ಈವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು