Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:7 - ಕನ್ನಡ ಸತ್ಯವೇದವು J.V. (BSI)

7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯಾಭಾವದಿಂದ ಮಾತಾಡಿಸು; ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನಕಾಲದಿಂದ ಈವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಮೇಲೆದ್ದು ನಿನ್ನ ಸೇವಕರೊಂದಿಗೆ ಮಾತನಾಡು; ಅವರನ್ನು ಪ್ರೋತ್ಸಾಹಿಸು. ಯೆಹೋವನಾಣೆ, ಈ ಕಾರ್ಯವನ್ನು ಮಾಡಲು ನೀನಿಂದು ಹೊರಗೆ ಹೋಗದಿದ್ದರೆ, ರಾತ್ರಿಯ ವೇಳೆಗೆ ನಿನ್ನೊಂದಿಗೆ ಯಾವ ಮನುಷ್ಯನೂ ಉಳಿಯುವುದಿಲ್ಲ. ನೀನು ನಿನ್ನ ಚಿಕ್ಕಂದಿನಿಂದ ಈವರೆಗೆ ಅನುಭವಿಸಿದ ಸಂಕಷ್ಟಗಳಲ್ಲೆಲ್ಲ ಇದು ತೀರ ಕೆಟ್ಟದಾಗಿರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:7
10 ತಿಳಿವುಗಳ ಹೋಲಿಕೆ  

ಪ್ರಜೆಗಳ ವೃದ್ಧಿ ರಾಜನ ಮಹಿಮೆ; ಪ್ರಜೆಗಳ ಕ್ಷಯ ಪ್ರಭುವಿಗೆ ಭಯ.


ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು; ಆ ಹುಡುಗಿಯನ್ನು ಮೋಹಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.


ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ;


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.


ನೀನು ಶತ್ರುಗಳನ್ನು ಪ್ರೀತಿಸುವವನೂ ವಿುತ್ರರನ್ನು ದ್ವೇಷಿಸುವವನೂ ಆಗಿದ್ದೀ; ನೀನು ನಿನ್ನ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟಿ. ಇದರಿಂದ ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು