Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:16 - ಕನ್ನಡ ಸತ್ಯವೇದವು J.V. (BSI)

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯಲ್ಲಿ ತಿವಿದದರಿಂದ ಎಲ್ಲರೂ ಸತ್ತು ಬಿದ್ದರು. ಆದದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ಹದಗತ್ತಿ ಹೊಲವೆಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದುದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ‘ಹದಗತ್ತಿ ಕ್ಷೇತ್ರ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:16
7 ತಿಳಿವುಗಳ ಹೋಲಿಕೆ  

ಆಗ ಅಬ್ನೇರನು ಯೋವಾಬನಿಗೆ - ಪ್ರಾಯಸ್ಥರು ಎದ್ದು ನಮ್ಮ ಮುಂದೆ ಆಡಲಿ ಎಂದು ಹೇಳಲು ಯೋವಾಬನು ಆಗಲಿ ಅಂದನು.


ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟುಬಂದು


ಅನಂತರ ಆ ದಿವಸ ಘೋರಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.


ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,


ಆಗ ಅಬ್ನೇರನು ಯೋವಾಬನನ್ನು - ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ ಎಂದನು.


ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದರಿದನು; ಅರಾಮ್ಯರು ಓಡಿಹೋಗಲು ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಕೆಲವು ಮಂದಿ ರಾಹುತರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.


ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದದರಿಂದ ಆ ಹೊಲಕ್ಕೆ ಅವರ ಮಾತಿನಲ್ಲಿ ಅಕೆಲ್ದಮಾ, ಅಂದರೆ ಜೀವಹತ್ಯದ ಹೊಲ ಎಂಬ ಹೆಸರು ಬಂತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು