Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:19 - ಕನ್ನಡ ಸತ್ಯವೇದವು J.V. (BSI)

19 ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೆ ಅಬ್ನೇರನನ್ನು ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೆ ಅಬ್ನೇರನನ್ನು ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಸಾಹೇಲನು ಯಾವ ಕಡೆಗೂ ತಿರುಗದೆ ನೇರವಾಗಿ ಅಬ್ನೇರನ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಸಾಯೇಲನು ಅಬ್ನೇರನನ್ನು ಬಲಗಡೆಗಾದರೂ, ಎಡಗಡೆಗಾದರೂ ತಿರುಗದೆ ಬೆನ್ನಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:19
9 ತಿಳಿವುಗಳ ಹೋಲಿಕೆ  

ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ; ನಿನ್ನ ಕಾಲನ್ನು ಕೇಡಿಗೆ ದೂರಮಾಡು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು.


ಆಗ ಅಬ್ನೇರನು ಅವನಿಗೆ - ನನ್ನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಂಡು ಪ್ರಾಯಸ್ಥರಲ್ಲೊಬ್ಬನನ್ನು ಹಿಡಿದು ಸುಲುಕೋ ಎಂದು ಹೇಳಿದನು; ಆದರೆ ಅಸಾಹೇಲನು ಒಪ್ಪಲಿಲ್ಲ.


ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ; ಎಡಕ್ಕಾದರೂ ಬಲಕ್ಕಾದರೂ ಓರೆಯಾಗಬೇಡಿರಿ.


ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಅಬ್ನೇರನು ಹಿಂದಿರುಗಿ ನೋಡಿ - ನೀನು ಅಸಾಹೇಲನೋ ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರ ಕೊಟ್ಟನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದದರಿಂದ ಅವರು ಇವನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು