Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:26 - ಕನ್ನಡ ಸತ್ಯವೇದವು J.V. (BSI)

26 ಆಗ ಅಬ್ನೇರನು ಯೋವಾಬನನ್ನು - ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:26
17 ತಿಳಿವುಗಳ ಹೋಲಿಕೆ  

ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.


ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಅದರ ದುರಾಲೋಚನೆಗಳ ನಿವಿುತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು ಅಲ್ಲಿನ ಲಾಳವಿಂಡಿಗೆಗಳನ್ನು ಧ್ವಂಸಮಾಡಿ ನುಂಗಿಬಿಡುವದು.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ನಾನು ಎಷ್ಟರವರೆಗೆ ಧ್ವಜವನ್ನು ನೋಡಲಿ, ಎಂದಿನ ತನಕ ತುತೂರಿಯ ಶಬ್ದವನ್ನು ಕೇಳಲಿ!


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಮಹನೀಯರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸಿ ನನ್ನನ್ನು ಅವಮಾನ ಪಡಿಸುವಿರಿ? ಯಾಕೆ ನಿರರ್ಥಕವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ.


ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?


ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವದಕ್ಕೆ ಉರ್ಲೊಡ್ಡುತ್ತಿರುವಿ? ನೀನು ಆಲೋಚಿಸು, ಆಮೇಲೆ ಮಾತಾಡೋಣ.


ಆಗ ದಾವೀದನು ದೂತನಿಗೆ ನೀನು ಹೋಗಿ - ಇದಕ್ಕೋಸ್ಕರವಾಗಿ ವ್ಯಸನ ಪಡಬೇಡ; ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುವದು. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬದಾಗಿ ಅರಸನು ಆಜ್ಞಾಪಿಸುತ್ತಾನೆಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು ಅಂದನು.


ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯಲ್ಲಿ ತಿವಿದದರಿಂದ ಎಲ್ಲರೂ ಸತ್ತು ಬಿದ್ದರು. ಆದದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ಹದಗತ್ತಿ ಹೊಲವೆಂದು ಹೆಸರಾಯಿತು.


ಆಗ ಅಬ್ನೇರನು ಯೋವಾಬನಿಗೆ - ಪ್ರಾಯಸ್ಥರು ಎದ್ದು ನಮ್ಮ ಮುಂದೆ ಆಡಲಿ ಎಂದು ಹೇಳಲು ಯೋವಾಬನು ಆಗಲಿ ಅಂದನು.


ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.


ಅದಕ್ಕೆ ಯೋವಾಬನು - ದೇವರ ಜೀವದಾಣೆ ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುತ್ತಿದ್ದಿಲ್ಲ ಎಂದು ಉತ್ತರಕೊಟ್ಟು ಕೂಡಲೆ ತುತೂರಿಯನ್ನು ಊದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು