Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:6 - ಕನ್ನಡ ಸತ್ಯವೇದವು J.V. (BSI)

6 ಆತನ ಕೃಪಾಸತ್ಯತೆಗಳು ನಿಮ್ಮೊಂದಿಗಿರಲಿ; ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ಅಚಲ ಪ್ರೀತಿಸತ್ಯತೆಗಳು ನಿಮ್ಮೊಂದಿಗಿರಲಿ! ಈ ಸತ್ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:6
15 ತಿಳಿವುಗಳ ಹೋಲಿಕೆ  

ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.


ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವದು; ಹೀಗಿರುವದರಿಂದ ನಿನ್ನೆ ಬಂದಂಥ ನಿನ್ನನ್ನು ಕರಕೊಂಡು ಹೋಗಿ ಸುಮ್ಮನೆ ಯಾಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರರನ್ನು ಕರಕೊಂಡು ಹಿಂದಿರುಗಿಹೋಗು; ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ ಎಂದು ಹೇಳಿದನು.


ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದಾಗ


ಆಗ ದಾವೀದನು ಅವನಿಗೆ - ಹೆದರಬೇಡ; ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂವಿುಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಮತ್ತು ನೀನು ಪ್ರತಿದಿನ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು ಎಂದು ಹೇಳಿದನು.


ಅರಸನು ಅವನಿಗೆ - ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ ಅಂದನು. ಆಗ ಚೀಬನು ಅರಸನಿಗೆ - ಯೋನಾತಾನನಿಗೆ ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ ಎಂದು ಹೇಳಿದನು.


ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿರುವದರಿಂದ ಸೌಲನು ಸತ್ತು ಹೋದರೂ ಶೂರರಾಗಿರ್ರಿ, ನಿಮ್ಮ ಕೈಗಳು ಜೋಲು ಬೀಳದಿರಲಿ ಎಂದು ಹೇಳಿಸಿದನು.


ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.


ತಿರಿಗಿ ನಿಮ್ಮ ನಿಮ್ಮ ತೌರಮನೆಗೆ ಹೋಗಿರಿ; ನೀವು ನನ್ನನ್ನೂ ಮರಣಹೊಂದಿದ ನನ್ನ ಮಕ್ಕಳನ್ನೂ ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು