Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:9 - ಕನ್ನಡ ಸತ್ಯವೇದವು J.V. (BSI)

9 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್, ಬೆನ್ಯಾಮೀನ್ ಇವುಗಳ ಜನರ ಮೇಲೆಯೂ ಬೇರೆ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಗಿಲ್ಯಾದ್, ಆಶೇರ್, ಜೆಸ್ರೀಲ್, ಎಫ್ರಯಿಮ್, ಬೆನ್ಯಾಮೀನ್ ಇವುಗಳ ಜನರ ಮೇಲೆ ಮತ್ತು ಬೇರೆ ಎಲ್ಲ ಇಸ್ರಯೇಲರ ಮೇಲೆ ಅವನನ್ನು ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:9
19 ತಿಳಿವುಗಳ ಹೋಲಿಕೆ  

ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.


ಅವರು ಆ ದೇಶದ ಕಾನಾನ್ಯರನ್ನು ಹೊರಡಿಸದೆ ಅವರ ಮಧ್ಯದಲ್ಲೇ ವಾಸಮಾಡಿದರು.


ಇಜ್ರೇಲ್, ಕೆಸುಲ್ಲೋತ್,


ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 41,500 ಮಂದಿ.


ಲೇಯಳು - ನಾನು ಧನ್ಯಳಾದೆ; ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು ಎಂದು ಹೇಳಿ ಅದಕ್ಕೆ ಆಶೇರೆಂದು ಹೆಸರಿಟ್ಟಳು.


ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲ್ಯರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವಾಸ್ತ್ಯವಾದ ಗಿಲ್ಯಾದ್ ದೇಶಕ್ಕೆ ಹೋದರು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲ್ಯರು ಇಜ್ರೇಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು.


(ಸೌಲನ ಮಗನಾದ ಈಷ್ಬೋಶೆತನು ನಾಲ್ವತ್ತು ವರುಷದವನಾದಾಗ ಇಸ್ರಾಯೇಲ್ಯರನ್ನು ಆಳತೊಡಗಿ ಎರಡು ವರುಷ ರಾಜ್ಯಭಾರಮಾಡಿದನು.) ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.


ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡಿಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.


ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಮಂದಿ; ಆವರೆಗೆ ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಹೊಂದಿಕೊಂಡಿದ್ದರು.


ಎಫ್ರಾಯೀಮ್ ಗೋತ್ರಗಳ ದೇಶದ [ದಕ್ಷಿಣ ದಿಕ್ಕಿನ] ಮೇರೆಯು ಅಟಾರೋತದ್ದಾರಿನ ಪೂರ್ವದಿಕ್ಕಿನಿಂದ ತೊಡಗಿ ಮೇಲಿನ ಬೇತ್‍ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಗಿಯುತ್ತದೆ.


ಅದರ ಮೇರೆಯು ತಪ್ಪೂಹದಿಂದ ಪಶ್ಚಿಮ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಗಿಯುತ್ತದೆ. ಎಫ್ರಾಯೀಮ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.


ಇದಲ್ಲದೆ ಎಫ್ರಾಯೀಮ್ ಕುಲದವರಿಗೆ ಮನಸ್ಸೆಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರಕಿದವು.


ಯೋಸೇಫನ ಚೊಚ್ಚಲಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ. ಮನಸ್ಸೆಯ ಹಿರೀಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾದದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತಗಳು ಸಿಕ್ಕಿದವು.


ಚೀಟು ಮೊದಲು ಬೆನ್ಯಾಮೀನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತಗಳ ಮಧ್ಯದಲ್ಲಿರುತ್ತದೆ.


ಇದೇ ದಕ್ಷಿಣದಿಕ್ಕಿನ ಮೇರೆಯು. ಯೊರ್ದನ್ ಹೊಳೆಯೇ ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ತ್ಯದ ಸುತ್ತಣ ಮೇರೆಯು ಇದೇ.


ಎಫ್ರಾಯೀವಿುನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟು ನೂರು ಮಂದಿ ಮಹಾರಣವೀರರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು