2 ಸಮುಯೇಲ 20:10 - ಕನ್ನಡ ಸತ್ಯವೇದವು J.V. (BSI)10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನನ್ನು ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರುಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ; ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಮುಂದೆ ನಡೆದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನ ಕರುಳೆಲ್ಲಾ ಹೊರಗೆ ಬಂದುವು. ಎರಡನೆಯ ಸಾರಿ ಇರಿಯಬೇಕಾಗಿರಲಿಲ್ಲ; ಅಷ್ಟಕ್ಕೆ ಅವನು ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು. ಅಧ್ಯಾಯವನ್ನು ನೋಡಿ |