Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:11 - ಕನ್ನಡ ಸತ್ಯವೇದವು J.V. (BSI)

11 ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು - ದಾವೀದ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ” ಎಂದು ಕೂಗಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕಾಗಿ ಮುಂದೆ ನಡೆದಾಗ ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗು ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ,” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋವಾಬನ ಯುವಸೈನಿಕರಲ್ಲಿ ಒಬ್ಬನು ಅಮಾಸನ ದೇಹದ ಹತ್ತಿರ ನಿಂತುಕೊಂಡು, “ಯೋವಾಬನನ್ನು ಮತ್ತು ದಾವೀದನನ್ನು ಬೆಂಬಲಿಸುವ ಪ್ರತಿಯೊಬ್ಬರೂ ಯೋವಾಬನನ್ನು ಹಿಂಬಾಲಿಸಲೇಬೇಕು. ಶೆಬನನ್ನು ಅಟ್ಟಿಸಿಕೊಂಡು ಹೋಗಲು ಅವನಿಗೆ ಸಹಾಯಮಾಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು, “ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ, ಯಾವನು ದಾವೀದನಿಗೆ ಹೊಂದಿದವನೋ, ಅವನು ಯೋವಾಬನ ಹಿಂದೆ ಹೋಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:11
6 ತಿಳಿವುಗಳ ಹೋಲಿಕೆ  

ಶವವನ್ನು ಆಚೆ ಹಾಕಿದನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೋವಾಬನನ್ನು ಹಿಂಬಾಲಿಸಿದರು.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ - ಅಲ್ಲಿ ನನ್ನ ಪಕ್ಷದವರು ಯಾರು ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಸಂಗತಿಯು ಹೀಗಿರುವದಿಲ್ಲ; ಎಫ್ರಾಯೀಮ್ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನೇ ಒಪ್ಪಿಸಿರಿ; ನಾನು ಊರನ್ನು ಬಿಟ್ಟುಹೋಗುತ್ತೇನೆ ಎಂದು ಹೇಳಿದನು. ಅದಕ್ಕೆ ಸ್ತ್ರೀಯು - ನೋಡು, ಈಗಲೇ ಅವನ ತಲೆಯು ಗೋಡೆಯಕಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವದು ಎಂದು ಉತ್ತರಕೊಟ್ಟು


ಅನಂತರ ಅರಸನು ಅಮಾಸನಿಗೆ - ನೀನು ಮೂರು ದಿನಗಳೊಳಗಾಗಿ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು ಎಂದು ಆಜ್ಞಾಪಿಸಿದನು.


ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರೂ ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವದನ್ನು ಆ ಮನುಷ್ಯನು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು ಹೊಲದಲ್ಲಿ ಹಾಕಿ ಅದನ್ನು ಬಟ್ಟೆಯಿಂದ ಮುಚ್ಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು